ಚಾರ್ಮಾಡಿ ಘಾಟ್: ಮತ್ತೆ ಗುಡ್ಡ ಕುಸಿತ
ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಮತ್ತೆ ಗುಡ್ಡ ಕುಸಿದಿದೆ.
ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ. ಚಾರ್ಮಾಡಿ ಘಾಟಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾಹನ ಸಂಚಾರ ಅಲ್ಪ ತೊಂದರೆ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ನೀರು ಹರಿಯುತ್ತಿದೆ ಎಂದು ತಿಳಿದು ಬಂದಿದೆ.