ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕೊಲೆ: ಇಬ್ಬರು ಅರೆಸ್ಟ್
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ನಿವಾಸಿಯಾದ, ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ (83) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಬಗ್ಗೆ ಮಹಿತಿ ಲಭ್ಯವಾಗಿದೆ.
ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಆರೋಪಿಗಳು ಸದರಿ ಕೃತ್ಯವನ್ನು ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿರುತ್ತದೆ. ಆರೋಪಿಗಳ ಪೈಕಿ ಓರ್ವ ಅಪರಾಧಿ ಹಿನ್ನೆಲೆ ಹೊಂದಿದ್ದು, ಆತನ ವಿರುದ್ಧ ಕೇರಳ ರಾಜ್ಯದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುವ ಬಗ್ಗೆ ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ ಎಂದು ಎಸ್.ಪಿ ಯವರು ಮಾಹಿತಿ ನೀಡಿದ್ದಾರೆ.