ಮಹಿಳೆಯರ ಮೇಲಿನ ಅಪರಾಧಗಳು ಅಕ್ಷಮ್ಯ: ಮೋದಿ
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಜಲಗಾಂವ್ ನಲ್ಲಿ ‘ಲಖಪತಿ ದೀದಿ ಸಮ್ಮೇಳನ’ದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಮಹಿಳೆಯರ ಸುರಕ್ಷತೆ ಬಹಳ ಮುಖ್ಯ. ಮಹಿಳೆಯರ ಮೇಲಿನ ಅಪರಾಧಗಳು ಅಕ್ಷಮ್ಯ ಎಂದು ನಾನು ಮತ್ತೊಮ್ಮೆ ಪ್ರತಿ ರಾಜ್ಯ ಸರ್ಕಾರಕ್ಕೆ ಹೇಳುತ್ತೇನೆ. ಅಪರಾಧಿಗಳು ಯಾರೇ ಆಗಿರಲಿ, ಅವರನ್ನು ಬಿಡಬಾರದು” ಎಂದು ಹೇಳಿದ್ದಾರೆ.