ಉಪ್ಪಿನಂಗಡಿ: ಇಳಂತಿಲ ಜ್ಞಾನ ಭಾರತಿ ಇಂಗ್ಲಿಷ್ ಮೀಡಿಯಮ್ ಸ್ಕೂಲ್’ನಲ್ಲಿ ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ
ಉಪ್ಪಿನಂಗಡಿ: ಜ್ಞಾನ ಭಾರತಿ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಇಳಂತಿಲ ಇಲ್ಲಿ ಶಾಲೆಯ ವಿದ್ಯಾರ್ಥಿಗಳು ಮಹಿಳೆ ಮತ್ತು ಹೆಣ್ಣು ಮಕ್ಕಳ ಸುರಕ್ಷತೆ ಅಂಗವಾಗಿ ವಿದ್ಯಾರ್ಥಿಗಳ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕಿ ನಿಹಮ ಫಾತಿಮ ಮಾತನಾಡಿದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ಅರುಣಾ, ತಾಹಿರ ಮತ್ತು ಉಷಾ ಉಪಸ್ಥಿತರಿದ್ದರು. ಶಾಲಾ ಸಂಚಾಲಕ ಯು ಟಿ ರವೂಫ್ ಮಾತನಾಡಿ ಎಲ್ಲಾ ಶಾಲೆಗಳಲ್ಲಿ ಈ ರೀತಿಯ ಕಾರ್ಯಕ್ರಮ ಮಾಡಿ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಶಾಲಾ ಪ್ರಾಂಶುಪಾಲ ಇಬ್ರಾಹಿಮ್ ಖಲೀಲ್ ಮಾತನಾಡಿ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ವನ್ನು ಎಲ್ಲರು ಖಂಡಿಸಬೇಕು, ಸರ್ಕಾರವು ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಹೇಳಿದರು.