ರೈತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಸಂಸದೆ ಕಂಗನಾರನ್ನು ತರಾಟೆಗೆತ್ತಿಕೊಂಡ ಬಿಜೆಪಿ
ನವದೆಹಲಿ: ರೈತರ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡದಂತೆ ತಾಕೀತು ಮಾಡಿದೆ ಎಂದು ವರದಿಯಾಗಿದೆ.
ದೇಶದಲ್ಲಿ ಬಾಂಗ್ಲಾದೇಶದಂತಹ ಅರಾಜಕತೆ ಸೃಷ್ಟಿಸಲು ರೈತರ ಪ್ರತಿಭಟನೆಯಲ್ಲಿ ಯೋಜನೆ ರೂಪಿಸಲಾಗಿತ್ತು ಎಂದು ಕಂಗನಾ ರಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು. ಹೀಗಾಗಿ ಕಂಗನಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಬಿಜೆಪಿ ಅದು ಅವರ ವೈಯಕ್ತಿಕ ಹೇಳಿಕೆ ಹೊರತು ಪಕ್ಷದ ಹೇಳಿಕೆ ಅಲ್ಲ ಎಂದು ಹೇಳಿದೆ ಎಂದು ವರದಿಯಾಗಿದೆ.