ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ ನಟ ದರ್ಶನ್
ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿರುವುದು ವೈರಲ್ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದರು. ಅದರಂತೆ ಈಗ ದರ್ಶನ್ ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವುದು ಖಚಿತವಾಗಿದೆ.
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲು ನ್ಯಾಯಾಲಯದ ಅನುಮತಿ ಸಿಕ್ಕಿದ್ದು ಈ ಬಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ದರ್ಶನ್ ಮಾತ್ರವಲ್ಲದೇ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ.