ರಾಷ್ಟ್ರೀಯ

ದಿಲ್ಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್



ಹೊಸದಿಲ್ಲಿ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಯನಾಡ್ ಪುನರ್ವಸತಿ ಕುರಿತು ಚರ್ಚೆ ನಡೆಸಿದ್ದಾರೆ.

ಕೇಂದ್ರವು ಕೋರಿದ್ದ ಹೆಚ್ಚುವರಿ, ವಿವರವಾದ ಜ್ಞಾಪಕ ಪತ್ರವನ್ನೂ ರಾಜ್ಯ ಸರಕಾರವು ಸಲ್ಲಿಸಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಜು.30ರಂದು ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತಗಳಲ್ಲಿ 300ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಜನರು ಈಗಲೂ ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಮೂರು ಗ್ರಾಮಗಳು ಸಂಪೂರ್ಣವಾಗಿ ನಾಮಾವಶೇಷಗೊಂಡಿವೆ.

Leave a Reply

Your email address will not be published. Required fields are marked *

error: Content is protected !!