ಕೇಂದ್ರ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ನಿರ್ಣಯ
ಬೆಂಗಳೂರು: ಕೇಂದ್ರ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸದಿರಲು ಕರ್ನಾಟಕ ವಕ್ಫ್ ಮಂಡಳಿ ನಿರ್ಧರಿಸಿದ್ದು ವಕ್ಫ್ ಮಂಡಳಿಯ ಆಡಳಿತ ಸಮಿತಿ ಸಭೆಯಲ್ಲಿ ತಿದ್ದುಪಡಿಯನ್ನು ವಿರೋಧಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು. ಸಭೆಯ ನಂತರ ಸಚಿವರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ನಿರ್ಣಯದ ಪ್ರತಿಯನ್ನು ಸಲ್ಲಿಸಿದರು. ತಿದ್ದುಪಡಿಯನ್ನು ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಅವರು ಒತ್ತಾಯಿಸಿದ್ದಾರೆ.