ರಾಷ್ಟ್ರೀಯ

ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಮಮತಾ ಬ್ಯಾನರ್ಜಿ



ಕೊಲ್ಕತ್ತಾ: ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಕಾನೂನನ್ನು ತರಬೇಕೆಂದು ಆಗ್ರಹಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತೊಮ್ಮೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಕೇಂದ್ರ ಕಾನೂನನ್ನು ತರಲು ಒತ್ತಾಯಿಸಿದ್ದಾರೆ. ಇಂತಹ ಸೂಕ್ಷ್ಮ ವಿಷಯದ ಕುರಿತು ಇನ್ನೂ ನಿಮ್ಮಿಂದ ಯಾವುದೇ ಉತ್ತರ ಬಂದಿಲ್ಲ. ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ ಮಾತ್ರ ಉತ್ತರವನ್ನು ಸ್ವೀಕರಿಸಲಾಗಿದೆ ಎಂದಿದ್ದಾರೆ.

7 ದಿನಗಳ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಮಹಿಳೆಯರು ಸುರಕ್ಷತೆ ವಿಚಾರವಾಗಿ ಅತ್ಯಾಚಾರದಂತಹ ಗಂಭೀರ, ಘೋರ ಅಪರಾಧಗಳಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯನ್ನು ಸೂಚಿಸುವ ಕಟ್ಟುನಿಟ್ಟಾದ ಕೇಂದ್ರ ಕಾನೂನಿನ ಮೂಲಕ ಸಮಗ್ರವಾಗಿ ಪರಿಹರಿಸಬೇಕಾಗಿದೆ ಎಂದು ಪತ್ರದಲ್ಲಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!