ಕರಾವಳಿ

ಮುಡಾ ಪ್ರಕರಣ: ಕಾಂಗ್ರೆಸ್ ನಿಂದ ರಾಜಭವನ ಚಲೋ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಆರೋಪ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಆ.31ರಂದು ಪ್ರತಿಭಟನೆ ನಡೆಸಿತು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.

ನಂತರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಡಳಿತ ಪಕ್ಷದ ನಾಯಕರು ‘ರಾಜಭವನ ಚಲೋ’ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದೃಶ್ಯ ಕಂಡು ಬಂತು.

Leave a Reply

Your email address will not be published. Required fields are marked *

error: Content is protected !!