ಪುರುಷರಕಟ್ಟೆ: ಹೊತ್ತಿ ಉರಿದ ಹಾರ್ಡ್ ವೇರ್ ಅಂಗಡಿ
ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಆ.31ರಂದು ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ್ದು ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಅಂಗಡಿ ಮಾಲಿಕರು ಅಂಗಡಿ ಬಂದ್ ಮಾಡಿ ಮನೆಗೆ ಹೋದ ಅಲ್ಪ ಸಮಯದಲ್ಲೇ ಅಂಗಡಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ಸಂಭವಿಸಿರಬಹುದು ಎಂದು ಸಂಶಯಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.