ನನ್ನ ವಿರುದ್ಧದ ಆರೋಪಗಳಿಗೆ ಕಾನೂನು ರೀತಿಯಲ್ಲಿ ಹೋರಾಟ: ಪುತ್ತಿಲ
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ವಿರುದ್ದ ಮಹಿಳೆಯೋರ್ವರು ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ನೀಡಿರುವ ದೂರಿಗೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು ಇದೀಗ ಅರುಣ್ ಕುಮಾರ್ ಪುತ್ತಿಲ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆಯಿದ್ದು ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಮುಂದಿನ ದಿನಗಳಲ್ಲಿ ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.