ಕುಂಬ್ರ: ಆಂಬ್ಯುಲೆನ್ಸ್-ಕಂಟೈನರ್ ಅಪಘಾತ-ಐವರಿಗೆ ಗಾಯ
ಪುತ್ತೂರು: ಅನಾರೋಗ್ಯದಲ್ಲಿರುವ ಮಗುವನ್ನು ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್‌ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಸೆ.2ರಂದು ನಡೆದಿದೆ.
ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬ್ಯಲೆನ್ಸ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಘಟನೆಯಿಂದ ಆಂಬ್ಯಲೆನ್ಸ್‌ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಮತ್ತೊಂದು ಆಂಬ್ಯಲೆನ್ಸ್ ಕರೆಸಿ ಅದರಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅಪಘಾತದಿಂದ ಆಂಬ್ಯಲೆನ್ಸ್ ಹಾಗೂ ಕಂಟೈನರ್ ಗೆ ಹಾನಿ ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಸಂಪ್ಯ ಪೊಲೀಸ್ ಠಾಣಾ ಎಸ್ಸೈ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.