ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ: ಯುವಕ ಮೃತ್ಯು
ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಯುವಕನೋರ್ವ ಸಾವನ್ನಪ್ಪಿದ ಘಟನೆ ಬಜ್ಪೆ ಮೂಡುಪೆರಾರ ಕಾಯರಾಣೆಯಲ್ಲಿ ಸೆ.1ರಂದು ನಡೆದಿದೆ.
ಮೂಡುಪೆರಾರ ಕಾಯರಾಣೆ ನಿವಾಸಿ ಪ್ರದೀಪ್ ಪೂಜಾರಿ (31ವ) ಮೃತರು. ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.