ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬೆಂಗಳೂರಿನ ಹೋಟೆಲೊಂದರಲ್ಲಿ ಮಹಜರು
ಪುತ್ತೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರು ಹೊಟೇಲೊಂದರಲ್ಲಿ ಸೆ.3ರಂದು ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಹಿಳೆಯನ್ನು ಸೆ.2 ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು.