ಕರಾವಳಿರಾಜಕೀಯ

ಸುಳ್ಯ: ಬಿಜೆಪಿಯಿಂದ ಸದಸ್ಯತ್ವ ಅಭಿಯಾನ



ಸುಳ್ಯ: ಬಿಜೆಪಿಯ ಮುಂದಿನ ಆರು ವರ್ಷಗಳ ಅವಧಿಯ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಚಾಲನೆ ನೀಡಿದ್ದು ಈ ಸಂದರ್ಭದಲ್ಲಿ ಸುಳ್ಯದಲ್ಲೂ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಯಿತು.


ಭಾರತೀಯ ಜನತಾ ಪಾರ್ಟಿಯ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕರವರು ಮುಂದಿನ ಒಂದು ತಿಂಗಳ ಕಾಲ ನಡೆಯುವಂತಹ ಸದಸ್ಯತ್ವ ಅಭಿಯಾನದ ಮಾಹಿತಿ ನೀಡಿದರು. ಶಾಸಕಿ ಭಾಗೀರಥಿ ಮುರುಳ್ಯರವರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ಸದಸ್ಯತ್ವವನ್ನು ನೋಂದಾಯಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಪೂರ್ವ ಮಂಡಲಾಧ್ಯಕ್ಷರುಗಳಾದ ಹರೀಶ್ ಕಂಜಿಪಿಲಿ, ಏ ವಿ ತೀರ್ಥರಾಮ, ಎಸ್ ಎನ್ ಮನ್ಮಥ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಉಪಾಧ್ಯಕ್ಷ ಬುದ್ಧನಾಯ್ಕ್, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾದರ ಕಾರ್ಯದರ್ಶಿ ನಾರಾಯಣ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!