ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದ ಸಲಹಾ ಸಮಿತಿ ಅಧ್ಯಕ್ಷರಾಗಿ ಅಶ್ರಫ್ ಶಾ ಮಂತೂರು ಆಯ್ಕೆ

ಪುತ್ತೂರು: ಗಡಿನಾಡಿನಲ್ಲಿ ಕನ್ನಡ ಭಾಷೆ ಸಾಹಿತ್ಯ ಕಲೆಗಳ ಬೆಳವಣಿಗೆಗೆ ತನ್ನದಾದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈ ಘಟಕದ ಸಲಹಾ ಸಮಿತಿ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಶಿಕ್ಷಣ ಪ್ರೇಮಿ, ಬೆಳಂದೂರು ಈಡನ್ ಗ್ಲೋಬಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಅಶ್ರಫ್ ಷಾ ಮಾಂತೂರು ರವರನ್ನು ನೇಮಿಸಿ ಅಕಾಡೆಮಿ ಸಂಸ್ಥಾಪಕ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್ ಪ್ರದೀಪ ಕುಮಾರ ಕಲ್ಕೂರ ಆದೇಶ ಹೊರಡಿಸಿದ್ದಾರೆ.