ರಾಹುಲ್ ಭೇಟಿಯಾದ ಭಜರಂಗ್ ಪುನಿಯಾ, ವಿನೇಶ್ ಫೋಗಟ್
ನವದೆಹಲಿ: ಖ್ಯಾತ ಕುಸ್ತಿಪಟುಗಳಾದ ಭಜರಂಗ್ ಪುನಿಯಾ ಹಾಗೂ ವಿನೇಶ್ ಫೋಗಟ್ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂಚಿತವಾಗಿ ಭಜರಂಗ್ ಪುನಿಯಾ ಹಾಗೂ ವಿನೇಶ್ ಫೋಗಟ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಟಿಕೆಟ್ ಪಡೆದು ಅವರಿಬ್ಬರು ಸ್ಪರ್ಧಿಸುವ ಸಾಧ್ಯತೆ ಇದರೆನ್ನಲಾಗುತ್ತಿದೆ. ಆದರೆ ಅಧಿಕೃತವಾಗಿ ಘೋಷಣೆ ಆಗಿಲ್ಲ.