ಉತ್ತರ ಕೊರಿಯಾ 30 ಅಧಿಕಾರಿಗಳಿಗೆ ಮರಣದಂಡನೆ ಶಿಕ್ಷೆ
ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆದೇಶಿಸಿದ್ದಾರೆ. ಉತ್ತರ ಕೊರಿಯಾದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸೃಷ್ಟಿಯಾದ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ ಆರೋಪದಲ್ಲಿ 30 ಮಂದಿ ಅಧಿಕಾರಿಗಳಿಗೆ ಮರಣದಂಡನೆಗೆ ಆದೇಶಿಸಲಾಗಿದೆ.

ಉತ್ತರ ಕೊರಿಯಾದಲ್ಲಿ ಭೀಕರ ಪ್ರವಾಹದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದರು. ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದ್ದವು. ಉಕ್ಕಿ ಹರಿದ ನದಿ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ ತಮ್ಮದೇ ಪಕ್ಷದ ಕಾರ್ಯದರ್ಶಿಯನ್ನು ಕಿಮ್ ವಜಾಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರವಾಹದಿಂದ ಅಧಿಕಾರಿಗಳು ಮಾತ್ರ ತಮ್ಮ ತಲೆ ಎಂದು ಉರುಳುವುದೋ ಎಂಬ ಭೀತಿಯಲ್ಲೇ ದಿನ ಕಳೆಯುವಂತಾಗಿದ್ದು ಉತ್ತರ ಕೊರಿಯಾದ ಸರ್ವಾಧಿಕಾರಿ ಅಧ್ಯಕ್ಷರ ಈ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.