ಕಡಬ: ಕಾಲು ಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು
ಕಡಬ: ಕಾಲು ಜಾರಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ಸೆ.5ರಂದು ಸಂಜೆ ನಡೆದಿದೆ.
ಮೃತ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35ವ) ಎಂದು ಗುರುತಿಸಲಾಗಿದೆ. ಉಮೇಶ ಸಂಜೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು ಎನ್ನಲಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದರಿಂದ ಹ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.