ಖ್ಯಾತ ಕುಸ್ತಿ ಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್ ಸೇರ್ಪಡೆ
ನವದೆಹಲಿ: ಖ್ಯಾತ ಕುಸ್ತಿ ಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭೇಟಿ ಮಾಡಿ, ಮಾತುಕತೆ ನಡೆಸಿದ್ದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ನಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸವ ಊಹಾಪೋಹದ ಬಗ್ಗೆ ಸುದ್ಧಿ ಹಬ್ಬಿತ್ತು.
ಅಧಿಕೃತ ಸೇರ್ಪಡೆಗೂ ಮುನ್ನ ಅವರು ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾದರು.