ಕೀನ್ಯಾದ ವಸತಿ ಶಾಲೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 17 ಮಕ್ಕಳು ಸಾವನ್ನಪ್ಪಿ, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಹಿಲ್‌ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಇದೆ ಎನ್ನಲಾಗುತ್ತಿದೆ. ಅಗ್ನಿ ಅವಘಡಕ್ಕೆ ಕಾರಣ ಏನೆಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.