ಕರಾವಳಿಕ್ರೈಂ

ಬಿಸಿ ರೋಡ್: ಭೀಕರ ಕಾರು ಅಪಘಾತ-ಪತ್ನಿ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು  ಅಪಘಾತವಾಗಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವ ವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
‌ ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!