ಹಾವನ್ನು ಬಾಯಿಯಲ್ಲಿ ಕಚ್ಚಿ ರೀಲ್ಸ್ ಹುಚ್ಚಾಟ, ಯುವಕ ಸಾವು
ರೀಲ್ಸ್ ಕ್ರೇಜ್ ಎಲ್ಲಿಯವರೆಗೆ ಹೋಗಿದೆ ಎಂದರೆ ಕೆಲವರ ಪ್ರಾಣಕ್ಕೂ ಕುತ್ತು ತರುತ್ತಿದೆ. ಇಲ್ಲೊಬ್ಬ ಸಾಹಸ ಮಾಡಲು ಹೋಗಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.
ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್ ಗ್ರಾಮದ ಹಾವಾಡಿಗನೊಬ್ಬನ ಮಗ ಶಿವ ಎಂಬಾತ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಹುಚ್ಚು ಸಾಹಸವನ್ನು ಮಾಡಿದ್ದಾನೆ ಎನ್ನಲಾಗಿದೆ.