ಹೊಸ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವವರು NRC ಅರ್ಜಿ ರಶೀದಿ ಸಂಖ್ಯೆ ನಮೂದಿಸುವುದು ಕಡ್ಡಾಯ: ಸಿಎಂ ಹಿಮಂತ್ ಬಿಸ್ವಾ
ಅಸ್ಸಾಂ ರಾಜ್ಯದಲ್ಲಿ ಹೊಸ ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಎನ್ಆರ್ಸಿ (NRC) ಅರ್ಜಿ ರಶೀದಿ ಸಂಖ್ಯೆಯನ್ನು ನಮೂದಿಸಬೇಕು ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಎನ್ ಆರ್ ಸಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸುವುದರಿಂದ ಅಕ್ರಮ ವಿದೇಶಿಗರ ಒಳಹರಿವು ನಿಲ್ಲುತ್ತದೆ ಮತ್ತು ಆಧಾರ್ ಕಾರ್ಡ್ ಗಳನ್ನು ನೀಡುವಲ್ಲಿ ರಾಜ್ಯ ಸರ್ಕಾರವು ಅತ್ಯಂತ ಕಟ್ಟುನಿಟ್ಟಾಗಿದೆ ಎಂದು ಅವರು ಹೇಳಿದ್ದಾರೆ.
“ನಮ್ಮ ಜನಸಂಖ್ಯೆಗಿಂತ ಹೆಚ್ಚು ಆಧಾರ್ ಕಾರ್ಡ್ ಅರ್ಜಿಗಳಿವೆ. ಕೆಲವು ಅನುಮಾನಸ್ಪದ ನಾಗರಿಕರಿದ್ದಾರೆ ಎಂದು ಇದು ಸೂಚಿಸುತ್ತದೆ. ಹೀಗಾಗಿ ಹೊಸ ಅರ್ಜಿ ಸಲ್ಲಿಸುವವರು ತಮ್ಮ ಎನ್ಆರ್ಸಿ ಅರ್ಜಿ ರಶೀದಿ ಸಂಖ್ಯೆಯನ್ನು ನಮೂದಿಸಬೇಕು” ಎಂದು ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.