ಮಂಗಳೂರು: ಹಿದಾಯ ಫೌಂಡೇಶನ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಝಕರಿಯಾ ಬಜ್ಪೆ ಆಯ್ಕೆ
ಮಂಗಳೂರು: ಹಿದಾಯ ಫೌಂಡೇಶನ್ ಟ್ರಸ್ಟ್, ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಝಕರಿಯಾ ಬಜ್ಪೆ ಆಯ್ಕೆಯಾಗಿದ್ದಾರೆ.
ನಗರದ ಓಶಿಯನ್ ಪರ್ಲ್ ಹೋಟೇಲಿನಲ್ಲಿ ಟ್ರಸ್ಟ್ ಅಧ್ಯಕ್ಷ ಮನ್ಸೂರ್ ಅಹ್ಮದ್ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಖಾಸಿಂ ಅಹ್ಮದ್ ಟ್ರಸ್ಟ್ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಟ್ರಸ್ಟ್ ನಿರ್ವಹಿಸುತ್ತಿರುವ ಪ್ರಮುಖ ಐದು ಯೋಜನೆಗಳು ಮತ್ತು ಅದರ ನಿರ್ವಹಣೆಯ ವಿಧಾನಗಳ ಬಗ್ಗೆ ತಿಳಿಸಿದರು.
ಮುಂದಿನ 5 ವರ್ಷಗಳ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಝಕರಿಯಾ ಬಜ್ಪೆ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ರಿಯಾಝ್ ಬಾವ, ಎಸ್.ಎಂ.ಮುಸ್ತಫ ಭಾರತ್, ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಉಚ್ಚಿಲ್ ಮಸ್ಕತ್, ಕಾರ್ಯದರ್ಶಿಯಾಗಿ ಝಿಯಾವುದ್ದೀನ್ ಅಹ್ಮದ್, ಕೋಶಾಧಿಕಾರಿಯಾಗಿ ಬಿ.ಎಂ.ಶರೀಫ್ ಬೋಳಾರ, ಸಹ ಕೋಶಾಧಿಕಾರಿ ಹಾಗೂ ಆಡಳಿತಾಧಿಕಾರಿಯಾಗಿ ಆಬಿದ್ ಅಸ್ಗರ್ ಆಯ್ಕೆಯಾದರು. ಆಸಿಫ್ ಸೂಫಿಕಾನ, ಎಫ್.ಎಂ.ಬಶೀರ್ ಫರಂಗಿಪೇಟೆ, ಮಕ್ಬೂಲ್ ಅಹ್ಮದ್ ಹಾಗೂ ಅಫ್ರೋಝ್ ಅಸ್ಸಾದಿಯವರನ್ನು ಟ್ರಸ್ಟಿಗಳನ್ನಾಗಿ ನೇಮಿಸಲಾಯಿತು