ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕಾ ಪ್ರವಾಸ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಭಾರತೀಯ ಡಯಾಸ್ಪೊರಾ ಸದಸ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಬಲಪಡಿಸಲು ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ. ಯುಎಸ್‌ಗೆ ಆಗಮಿಸಿದ ವಿಪಕ್ಷ ನಾಯಕನಿಗೆ ಹೂಗುಚ್ಛ ನೀಡಿ, ಆರತಿ ಬೆಳಗಿ ಸ್ವಾಗತ ಕೋರಲಾಯಿತು.