ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಐವರು ಮೃತ್ಯು
ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ನಡೆದಿದೆ. ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೆಕ್ಸಾ ಮಾರುತಿ ಕಾರು ಹಾಗೂ ಟಿಯಾಗೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಟಿಯಾಗೋ ಕಾರು ಹೊರಟಿತ್ತು. ಸ್ಥಳಕ್ಕೆ ಮಧುಗಿರಿ ಪಿಎಸ್ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.