ಪ್ರೊ ಕಬಡ್ಡಿ ಲೀಗ್ ವೇಳಾಪಟ್ಟಿ ಪ್ರಕಟ: ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಣಕ್ಕೆ
Pro Kabaddi League 11 Schedule: ಕಳೆದ ಸೀಸನ್ ಪ್ರೊ ಕಬಡ್ಡಿ ಲೀಗ್ ಸೀಸನ್ 10 ಅನ್ನು 12 ನಗರಗಳಲ್ಲಿ ಆಯೋಜಿಸಲಾಗಿತ್ತು. ಎಲ್ಲಾ ಫ್ರಾಂಚೈಸಿಗಳು ತಮ್ಮ ತವರು ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಡಿದ್ದರು. ಆದರೆ ಈ ಬಾರಿ ಮೂರು ನಗರಗಳಲ್ಲಿ ಮಾತ್ರ ಟೂರ್ನಿಯನ್ನು ಆಯೋಜಿಸಲು ಪ್ರೊ ಕಬಡ್ಡಿ ಆಯೋಜಕರು ನಿರ್ಧರಿಸಿದ್ದಾರೆ. ಹೀಗಾಗಿ ತವರಿನಲ್ಲಿ ಬೆಂಗಳೂರು ಬುಲ್ಸ್ ತಂಡದ ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಅಭಿಮಾನಿಗಳಿರುವುದಿಲ್ಲ.

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಸೀಸನ್ 11 ಅಕ್ಟೋಬರ್ 8 ರಿಂದ ಶುರುವಾಗಲಿದೆ. ಹೈದಾಬಾದ್ನ ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ತೆಲುಗು ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ನ ಎಲ್ಲಾ ಪಂದ್ಯಗಳು ಮೂರು ನಗರಗಳಲ್ಲಿ ನಡೆಯಲಿದೆ. ಅದರಂತೆ ಮೊದಲ ಹಂತದ ಪಂದ್ಯಗಳು ಹೈದರಾಬಾದ್ನಲ್ಲಿ ನಡೆದರೆ, ದ್ವಿತೀಯ ಸುತ್ತಿನ ಪಂದ್ಯಗಳಿಗೆ ನೋಯ್ಡಾ ಒಳಾಂಗಣ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಇನ್ನು ಮೂರನೇ ಹಂತದ ಪಂದ್ಯಗಳು ಪುಣೆಯ ಬಾಲೆವಾಡಿ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ಜರುಗಲಿದೆ.
ಈ ಬಾರಿ ಸಹ ಒಟ್ಟು 12 ತಂಡಗಳು ಕಣಕ್ಕಿಳಿಯಲಿದ್ದು, ಪ್ರತಿ ದಿನ ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯವು ರಾತ್ರಿ 8 ಗಂಟೆಯಿಂದ ಶುರುವಾದರೆ, 2ನೇ ಪಂದ್ಯವು ರಾತ್ರಿ 9 ಗಂಟೆಗೆ ಆರಂಭವಾಗಲಿದೆ