ಸುಳ್ಯ: ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಹಿರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದ್ದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನೆರವೇರಿಸಿದರು.ಪ್ರಾಸ್ತಾವಿಕವಾಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಅಧಿಕಾರಿ ಆಶಾ ನಾಯಕ್ ಮಾತನಾಡಿದರು.
ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಮಾಲಿನಿ ವಿನೋದ್ ಉಳುವಾರು, ಪುಷ್ಪಾದರ ಕೊಡಂಕೆರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯಕ್, ದೈಹಿಕ ಶಿಕ್ಷಕಿ ಸರಸ್ವತಿ, ನಿವೃತ್ತ ಶಿಕ್ಷಕ ತೀರ್ಥರಾಮ, ಹೊನ್ನಪ್ಪ ಆಡ್ತಲೆ, ಶಿಕ್ಷಣ ಸಂಯೋಜಕಿ ಸಂಧ್ಯಾ, ದೈಹಿಕ ಶಿಕ್ಷಕ ಧನಂಜಯ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ ಸ್ವಾಗತಿಸಿದರು. ರಮ್ಯ ವಂದಿಸಿದರು.