ಮುಡಾ ಹಗರಣ: ಸಿದ್ದರಾಮಯ್ಯಗೆ ನಾಳೆ ನಿರ್ಣಾಯಕ ದಿನ, ಹೈಕೋರ್ಟ್‌ನಲ್ಲಿ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ಸುದೀರ್ಘ ವಿಚಾರಣೆ ನಡೆದಿದೆ. ಗುರುವಾರವೂ ವಿಚಾರಣೆ ಮುಂದುವರಿಯಲಿದ್ದು, ಬಹುತೇಕ ಆದೇಶ ಪ್ರಕಟವಾಗುವ ನಿರೀಕ್ಷೆಯೂ ಇದೆ. ಇದು, ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ ಎಂಬ ಕುತೂಹಲ ಕೆರಳಿಸಿದೆ.
ಬೆಂಗಳೂರು, ಸೆಪ್ಟೆಂಬರ್ 11: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಭವಿಷ್ಯ ಕರ್ನಾಟಕ ಹೈಕೋರ್ಟ್‌ನಲ್ಲಿದೆ. ಗುರುವಾರ ವಿಚಾರಣೆ ಮುಂದುವರಿಯಲಿದ್ದು, ಗುರುವಾರವೇ ಆದೇಶ ಹೊರಬೀಳುವ ಸಾಧ್ಯತೆಯಿದೆ. ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿಹಿಡಿಯುತ್ತದೆಯಾ? ಅಥವಾ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಮಾಡುತ್ತದೆಯಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಸೆಪ್ಟೆಂಬರ್ 12ರಂದೇ ವಿಚಾರಣೆಯನ್ನು ಮುಗಿಸೋಣ ಎಂದು ಈಗಾಗಲೇ ನ್ಯಾಯಮೂರ್ತಿಗಳು ಹೇಳಿದ್ದಾರೆ.
ಗುರುವಾರ ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದು, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ. ಹೀಗಾಗಿ ನಾಳೆ ಹೈಕೋರ್ಟ್‌ನಲ್ಲಿ ಹೈವೋಲ್ಟೇಜ್ ವಾದ-ಪ್ರತಿವಾದ ನಡೆಯುವ ಸಾಧ್ಯತೆಯಿದೆ.