ಪುತ್ತೂರು: ಪುತ್ತೂರು ಬೊಳುವಾರಿನಲ್ಲಿರುವ ಖಾಸಗಿ ಆಸ್ಪತ್ರೆಯ ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೆ.11 ರಂದು ಮುಂಜಾನೆ ನಡೆದಿದೆ.
ಆಸ್ಪತ್ರೆಯ ಪ್ರವೇಶದ್ವಾರದ ಬಳಿಯ ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ತಕ್ಷಣ ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.