ಪುತ್ತೂರು: ಬೈಕ್’ನಿಂದ ಬಿದ್ದು ಗಾಯಗೊಂಡಿದ್ದ ಉಪನ್ಯಾಸಕಿ ಮೃತ್ಯು
ಪುತ್ತೂರು: ಕೆಲ ದಿನಗಳ ಹಿಂದೆ ಬೈಕ್ ನಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆಯ್ಯೂರು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಪೂಜಾರಿಯವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಬಳಿಕ ಆಪರೇಶನ್ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ (ಸೆ.11) ನಿಧನರಾದರು ಎಂದು ತಿಳಿದುಬಂದಿದೆ.