ರಾಜಕೀಯರಾಜ್ಯ

ಮಂಡ್ಯ ನಾಗಮಂಗಲ ಕಲ್ಲು ತೂರಾಟ ಘಟನೆ:ಸಮಾಜದ ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ  ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯವಾಗಿದ್ದು, ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ಖಚಿತ.  ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ ಕಾಪಾಡಿಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!