ರಾಜಕೀಯರಾಷ್ಟ್ರೀಯ

ಮದ್ಯನೀತಿ ಹಗರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್’ಗೆ ಸುಪ್ರೀಂಕೋರ್ಟ್ ಜಾಮೀನು

ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.

ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. 10 ದಿನಗಳ ವಿಚಾರಣೆಯ ನಂತರ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!