ಬಂಟ್ವಾಳ: ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ಕಳವು
ಬಂಟ್ವಾಳ: ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲವೇ ಸಮಯದಲ್ಲಿ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ನ್ನು ಕಳವಾದ ಘಟನೆ ವರದಿಯಾಗಿದೆ.
ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿ.ಸಿ ರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲವೇ ಸಮಯದಲ್ಲಿ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ನ್ನು ಕಳವಾದ ಘಟನೆ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ರೈಮಂಡ್ ಲೋಬೋ ನಗರದ ಗ್ಲಾಡಿರಾ ನಿವಾಸಿಯಾಗಿರುವ ಅಂಬ್ರೋಸ್ ಡಿಸೋಜ ಅವರ ಲಕ್ಷಾಂತರ ರೂ ಇದ್ದ ಬ್ಯಾಗ್ ಕಳವಾಗಿದೆ.
ಬಿ.ಮೂಡ ಗ್ರಾಮದ ಬಿಸಿರೋಡಿನಲ್ಲಿರುವ ಎಸ್.ಬಿ.ಐ ಬ್ಯಾಂಕ್ ನ ಒಳಗಿನಿಂದ ರೂ.1,30,000 ನಗದು ಕಳ್ಳತನವಾಗಿದೆ.
ಅಲ್ಲಿ ಎಂಟ್ರಿ ಮಾಡಿಸಿ ವಾಪಸು ಟೇಬಲ್ ಕಡೆ ಬಂದಾಗ ಬ್ಯಾಗ್ ಅಲ್ಲಿರಲಿಲ್ಲ. ಇದೀಗ ಪಾಸ್ ಬುಕ್ ಹಾಗೂ ದಾಖಲೆಗಳಿದ್ದ ಕಳವಾದ ಬ್ಯಾಗ್ ಬಿ.ಸಿ ರೋಡು ಕೈಕುಂಜೆ ರಸ್ತೆಯಲ್ಲಿ ಸಿಕ್ಕಿದೆ. ಕಳವು ಆಗಿರುವ ಹಣವನ್ನು ಮತ್ತು ಕಳವು ಮಾಡಿದ ಕಳ್ಳರನ್ನು ಪತ್ತೆ ಮಾಡಿಕೊಡಿ ಎಂದು ಅಂಬ್ರೋಸ್ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.