ವಿರಾಟ್ ಕೊಹ್ಲಿಯೇ ನನ್ನ ನಾಯಕತ್ವದಲ್ಲಿ ಆಡಿದ್ದಾರೆ: ರಾಜಕಾರಣಿಯ ಹೇಳಿಕೆ ವೈರಲ್
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಖತ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆ. ಈ ಹೇಳಿಕೆಯಲ್ಲಿ ವಿರಾಟ್ ಕೊಹ್ಲಿಯ ಹೆಸರು ಪ್ರಸ್ತಾಪಿಸುವ ಮೂಲಕ ಆರ್‌ಜೆಡಿ ನಾಯಕ ಎಲ್ಲರ ಗಮನ ಸೆಳೆದಿದ್ದಾರೆ.

ಖಾಸಗಿ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ನಾಯಕತ್ವದ ಬಗ್ಗೆ ಕೇಳಿ ಬರುತ್ತಿರುವ ಟೀಕೆಗಳಿಗೆ ಉತ್ತರಿಸಿದ ತೇಜಸ್ವಿ ಯಾದವ್, ಟೀಮ್ ಇಂಡಿಯಾ ಪರ ಆಡುತ್ತಿರುವ ವಿರಾಟ್ ಕೊಹ್ಲಿ ನನ್ನ ನಾಯಕತ್ವದಡಿಯಲ್ಲಿ ಆಡಿದ್ದಾರೆ. ನಾನು ರಾಜಕೀಯಕ್ಕೆ ಬರುವ ಮುಂಚೆ ಕ್ರಿಕೆಟಿಗನಾಗಿದ್ದೆ. ಅದರ ಬಗ್ಗೆ ಯಾರೂ ಸಹ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ