ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರಿಯಾಗಿಸಿ ಮತ್ತೊಮ್ಮೆ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸನಿಹದಲ್ಲೇ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಫ್ಲೋರಿಡಾದ ಪಶ್ಚಿಮ ಪಾಮ್‍ಬೀಚ್‍ನಲ್ಲಿರುವ ತಮ್ಮ ಗಾಲ್ಫ್ ಕ್ಲಬ್‍ನಿಂದ ಹೊರಡುತ್ತಿದ್ದಂತೆ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಟ್ರಂಪ್ ಆಟವಾಡುತ್ತಿದ್ದ ಕ್ಲಬ್‍ನ ಹೊರಗೆ ಗಸ್ತು ಕಾಯುತ್ತಿದ್ದ ಸೀಕ್ರೆಟ್ ಸರ್ವೀಸ್ ಏಜೆಂಟ್, ಬೇಲಿಯ ಹೊರಗಿನಿಂದ ಗುಂಡು ಹಾರಿಸುತ್ತಿರುವುದನ್ನು ಗಮನಿಸಿದ್ದಾರೆ ಎಂದು ವರದಿಯಾಗಿದೆ.
ಟ್ರಂಪ್ ಹತ್ಯೆಯ ಪ್ರಯತ್ನ ಇದಾಗಿದೆ ಎಂದು ವರದಿಯಾಗಿದ್ದು ಸ್ಥಳೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1.30ಕ್ಕೆ ನಡೆದ ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.