ಸುರತ್ಕಲ್: ಮಸೀದಿಗೆ ಕಲ್ಲೆಸೆತ ಪ್ರಕರಣ-ಐವರು ಆರೋಪಿಗಳ ಬಂಧನ
ಸುರತ್ಕಲ್: ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳೆಂದು ತಿಳಿದು ಬಂದಿದೆ.
ಕಳೆದ ರಾತ್ರಿ ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದ ಕಿಡಿಗೇಡಿಗಳು ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು. ಬಳಿಕ ಒಂದು ಬೈಕ್ ನಲ್ಲಿದ್ದ ಮೂವರು ಗಣೇಶ ಕಟ್ಟೆಯ ಕಡೆ ತೆರಳಿದ್ದರೆ, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರು ಬೈಕ್ ತಿರುಗಿಸಿಕೊಂಡು ವಾಪಸ್ ಸ್ಮಶಾನದ ಕಡೆಗೆ ಪರಾರಿಯಾಗಿದ್ದರು.