ಬೆಂಗಳೂರಿನಲ್ಲಿ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ದುಂಡುಮೇಜಿನ ಸಭೆ: ದ.ಕ ಜಿಲ್ಲೆಯಿಂದ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆ
ಪುತ್ತೂರು: ಮಕ್ಕಳ ಹಕ್ಕುಗಳನ್ನು ಸಹಕಾರಗೊಳಿಸುವಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಸೆ.16 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ದುಂಡುಮೇಜಿನ ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಯಾಗಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆಯಾಗಿದ್ದಾರೆ.
ಪುತ್ತೂರು ತಾಲೂಕಿನಿಂದ ಮಕ್ಕಳ ಪ್ರತಿನಿಧಿಯಾಗಿ ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು.ಹಸ್ತ ಬೆಳ್ಳಿಪ್ಪಾಡಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಪರವಾಗಿ ನೆಕ್ಕಿಲಾಡಿ 34 ರ ಗ್ರಾಪಂ ಅಭಿವೃದ್ದಿ ಅಧಿಕಾರಿ ಸತೀಶ್ ಭಾಗವಹಿಸಲಿದ್ದಾರೆ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಪುತ್ತೂರು ತಾಲೂಕು ಸಂಯೋಜಕಿ ಕಸ್ತೂರಿ ಆರ್ ತಿಳಿಸಿದ್ದಾರೆ.