ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನನ್ನು ನಾನೆಂದೂ ಒಪ್ಪುವದಿಲ್ಲ. ಅವನಿಂದಲೇ ಬಿಜೆಪಿ ಗೆ ಭ್ರಷ್ಟ ಎಂಬ ಕಳಂಕ ಬಂದಿದೆ ಎಂದು ಮಾಜಿ ಸಚಿವ, ಬಿಜೆಪಿಯ ರಮೇಶ್ ಜಾರಕಿಹೊಳಿ ಆಕ್ರೋಶ ಹೊರ ಹಾಕಿದ್ದಾರೆ.

ಪಕ್ಷದ ಮುಂದಿನ ಅಧ್ಯಕ್ಷ ಯಾರು ಎಂಬುದು ವರಿಷ್ಠರು ತೀರ್ಮಾನ ಮಾಡಬೇಕು ಎನ್ನುತ್ತಾ ವಿಜಯೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು.
ಬೆಳಗಾವಿಯ ಅಥಣಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ”ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಬಹಳ ಜೂನಿಯರ್. ಬಿಜೆಪಿಗೆ ಭ್ರಷ್ಟ ಎಂಬ ಲೇಬಲ್ ಕೊಟ್ಟವನೇ ವಿಜಯೇಂದ್ರ. ಅವನು ಅಧ್ಯಕ್ಷ ಆಗಿರುವುದಕ್ಕೆ ನನ್ನ ವಿರೋಧವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.