ರಾಜಕೀಯರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿಯವರ 74ನೇ ಜನ್ಮ ದಿನಾಚರಣೆ ಬಿಜೆಪಿಯಿಂದ ವಿವಿಧ ಕಾರ್ಯಕ್ರಮ



ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ.
ಮೋದಿ ಜನ್ಮ ದಿನ ಪ್ರಯುಕ್ತ ಬಿಜೆಪಿ ಅನೇಕ ಕಾರ್ಯಕ್ರಮಗಳನ್ನು ಕೂಡಾ ಹಮ್ಮಿಕೊಂಡಿದೆ. ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಕೂಡಾ ನಡೆಸಲಾಗಿದೆ.

ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜಗಮೆಚ್ಚಿದ ಜನನಾಯಕ, ಭಾರತ ಕಂಡ ಹೆಮ್ಮೆಯ ಪ್ರಧಾನಿ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ಹೇಳಿ, ಕೊಂಡಾಡಿದೆ.

Leave a Reply

Your email address will not be published. Required fields are marked *

error: Content is protected !!