ಬಂಟ್ವಾಳ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕಳ್ಳತನ.ಮನೆಯವರು ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು
ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ಸೆ.16 ರಂದು ನಡೆದಿದೆ. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.
ಸೆ.16ರಂದು ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ
ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸ್ಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಯಾರೋ ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿದ್ದು, ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು 1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.