ಜೈಲು ಪಾಲಾಗಿರುವ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ!
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.