ಶಾಸಕ ಮುನಿರತ್ನಗೆ ಜಾಮೀನು
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.