ಬೆಳ್ತಂಗಡಿ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದಂಪತಿ
ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸೆ.19ರಂದು ನಡೆದಿದೆ.
ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63ವ) ಹಾಗೂ ಅವರ ಪತ್ನಿ ಬೇಬಿ (46ವ) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಇವರಿಬ್ಬರೂ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಸಂಶಯಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.