ರಾಷ್ಟ್ರೀಯ

ಜನರ ನಂಬಿಕೆಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ: ಜಗನ್ ಮೋಹನ್ ರೆಡ್ಡಿ

ಹೈದರಾಬಾದ್: ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆಯ ಅಂಶವಿರುವ ತುಪ್ಪ ಬಳಸಲಾಗಿತ್ತು ಎಂಬ ಎಂಬ ಆರೋಪದ ಕುರಿತು ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯವು ವಿವರವಾದ ವರದಿ ಸಲ್ಲಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಈ ವಿವಾದದ ಕುರಿತು ಜಗನ್ ಮೋಹನ್ ರೆಡ್ಡಿ ಮೌನ ಮುರಿದಿದ್ದಾರೆ. ಚಂದ್ರಬಾಬು ನಾಯ್ಡು ಅವರು ದೇವರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ವೈಎಸ್‌ಆರ್‌ಸಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಇ ತಿರುಪತಿ ಲಡ್ಡು ವಿಷಯದಲ್ಲಿ ಹೇಳಿಕೆ ನೀಡಿದ್ದು ಪ್ರಸಾದದ ಅರ್ಹತೆಯ ಮಾನದಂಡವು ದಶಕಗಳಿಂದ ಬದಲಾಗಿಲ್ಲ. ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಮನಸ್ಥಿತಿ ಇರುವುದು ಚಂದ್ರಬಾಬು ನಾಯ್ಡುಗೆ ಮಾತ್ರ ಎಂದು ಜಗನ್ ರೆಡ್ಡಿ ಆರೋಪಿಸಿದ್ದಾರೆ. ಜನರ ಗಮನವನ್ನು ತಮ್ಮತ್ತ ಸೆಳೆಯಲು ಅವರು ಈ ರೀತಿ ಆರೋಪ ಮಾಡಿದ್ದಾರೆ ಎಂದು ಜಗನ್ ಮೋಹನ್ ರೆಡ್ಡಿ ಚಂದ್ರಬಾಬು ನಾಯ್ಡು ಅವರಿಗೆ ತಿರುಗೇಟು ನೀಡಿದ್ದಾರೆ. ಒಟ್ಟಿನಲ್ಲಿ ತಿರುಪತಿ ಲಡ್ಡು ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದ್ದು ರಾಜಕೀಯ ಕೆಸರೆರಚಾಟವೂ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!