ರಾಜ್ಯ

ಶಿರೂರು: ನಾಪತ್ತೆಯಾಗಿದ್ದ ಲಾರಿ ಪತ್ತೆ?



ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಅವರ ಲಾರಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದ್ದು ಲಾರಿಯ ಚಕ್ರ ಮೇಲ್ಭಾಗಕ್ಕೆ ಇರುವ ರೀತಿಯಲ್ಲಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!