ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ
ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನರನ್ನು ನಿನ್ನೆ ಮತ್ತೆ ಪೊಲೀಸರು ಅತ್ಯಾಚಾರ ಆರೋಪದಲ್ಲಿ ಬಂಧಿಸಿದ್ದರು.