ಪುರುಷರಕಟ್ಟೆ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಮೃತ್ಯು
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ.


ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಆಕ್ಟಿವಾ ಸವಾರ, ಹೋಳಿಗೆ ವ್ಯಾಪಾರಿ ಬಂಟ್ವಾಳ ತಾಲ್ಲೂಕಿನ ಪಂಜಲ ನಿವಾಸಿ ಗಣೇಶ್ ಅವರ ತಲೆ,ಕಾಲು ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ